ಯಾಜಕಕಾಂಡ 23:18 - ಕನ್ನಡ ಸತ್ಯವೇದವು J.V. (BSI)18 ಆ ರೊಟ್ಟಿಗಳೊಡನೆ ಒಂದು ವರುಷದ ಪೂರ್ಣಾಂಗವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ರೊಟ್ಟಿಗಳೊಡನೆ ಒಂದು ವರ್ಷದ ಕಳಂಕರಹಿತವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯನ್ನುಂಟುಮಾಡುವ ದಹನಬಲಿದಾನಗಳಾಗುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಜನರು ಸಮರ್ಪಿಸುವ ರೊಟ್ಟಿ, ಧಾನ್ಯ ಮತ್ತು ದ್ರಾಕ್ಷಾರಸಗಳೊಂದಿಗೆ ಒಂದು ಹೋರಿ, ಎರಡು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳನ್ನು ಅರ್ಪಿಸಲಾಗುವುದು. ಆ ಪಶುಗಳಲ್ಲಿ ಯಾವ ದೋಷವು ಇರಬಾರದು. ಅವುಗಳು ಯೆಹೋವನಿಗೆ ಅಗ್ನಿಯ ಮೂಲಕ ಅರ್ಪಿತವಾಗಲಿರುವ ಸಮರ್ಪಣೆಗಳಾಗಿವೆ. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ನೀವು ರೊಟ್ಟಿಯೊಂದಿಗೆ ಕಳಂಕರಹಿತವಾದ ಒಂದು ವರ್ಷದ ಏಳು ಕುರಿಮರಿಗಳನ್ನೂ ಒಂದು ಎಳೆಯ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅವು ಯೆಹೋವ ದೇವರಿಗೆ ದಹನಬಲಿಗಳಾಗುವುವು. ಅವುಗಳೊಂದಿಗೆ ಆಹಾರ ಬಲಿಯು ಮತ್ತು ಪಾನಾರ್ಪಣೆಗಳು, ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. ಅಧ್ಯಾಯವನ್ನು ನೋಡಿ |