Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:20 - ಕನ್ನಡ ಸತ್ಯವೇದವು J.V. (BSI)

20 ಯಾಜಕನು ಇವುಗಳನ್ನೂ ಪ್ರಥಮ ಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತವೆ. ಅವು ಯಾಜಕರಿಗೆ ಸಲ್ಲುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:20
12 ತಿಳಿವುಗಳ ಹೋಲಿಕೆ  

ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.


ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು.


ನಾವು ನಿಮಗೋಸ್ಕರ ಆತ್ಮಸಂಬಂಧವಾದ ಬೀಜವನ್ನು ಬಿತ್ತಿದ ಮೇಲೆ ನಿವ್ಮಿುಂದ ಶರೀರಸಂಬಂಧವಾದ ಪೈರನ್ನು ಕೊಯ್ಯುವದು ದೊಡ್ಡದೋ?


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ನಿಮ್ಮ ನಿವಾಸಗಳಿಂದ [ತಂದ ಹಿಟ್ಟಿನಲ್ಲಿ] ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.


ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಒಂದು ವರುಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.


ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆ ಕೂಡಬೇಕೆಂಬದಾಗಿ ಪ್ರಸಿದ್ಧಪಡಿಸಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು