Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:28 - ಕನ್ನಡ ಸತ್ಯವೇದವು J.V. (BSI)

28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅದು ದೋಷಪರಿಹಾರಕ ದಿವಸ; ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕಾಚಾರವು ನಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:28
15 ತಿಳಿವುಗಳ ಹೋಲಿಕೆ  

ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ, ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ; ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು.


ಇಸ್ರಾಯೇಲ್ಯರ ಎಲ್ಲಾ ದೋಷಗಳನ್ನು ನಿವಾರಣೆಮಾಡುವದಕ್ಕಾಗಿ ಅವರಿಗೋಸ್ಕರ ವರುಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬದೇ ನಿಮಗೆ ಶಾಶ್ವತನಿಯಮ. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ಈತನು, ಅಂದರೆ ಯೇಸು ಕ್ರಿಸ್ತನು, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿಹೊಂದಿದವನು. ನೀರಿನಿಂದ ಮಾತ್ರವಲ್ಲ, ನೀರಿನಿಂದಲೂ ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ.


ನಾವು ದೇವರನ್ನು ಪ್ರೀತಿಸಿದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟದರಲ್ಲಿಯೇ ಪ್ರೀತಿಯ ನಿಜ ಗುಣವು ತೋರಿ ಬರುತ್ತದೆ.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಪವಿತ್ರರಾಗುತ್ತಿರುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಸಿದ್ಧಿಗೆ ತಂದಿದ್ದಾನಷ್ಟೆ.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧರಾದೆವು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಯಾಕಂದರೆ ನೀವು ಪರಿಶುದ್ಧರಾಗುವದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.


ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು