Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:3 - ಕನ್ನಡ ಸತ್ಯವೇದವು J.V. (BSI)

3 ಆರು ದಿನಗಳಲ್ಲಿ ನೀವು ಕೆಲಸವನ್ನು ನಡಿಸಬೇಕು; ಏಳನೆಯ ದಿನವು ಯಾವ ಕೆಲಸವನ್ನೂ ಮಾಡಕೂಡದ ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನೂ ಮಾಡಕೂಡದು. ನಿಮ್ಮ ಎಲ್ಲಾ ನಿವಾಸಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:3
17 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳೂ ಕತ್ತೆಗಳೂ ದಾಸದಾಸಿಯರೂ ಪರದೇಶಸ್ಥರೂ ವಿಶ್ರವಿುಸಿಕೊಳ್ಳಲಿ.


ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.


ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಉಳುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.


ಯಾಕಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್‍ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧತೈಲವನ್ನೂ ಸಿದ್ಧಮಾಡಿಕೊಂಡರು.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ


ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ


ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು ಸಬ್ಬತ್‍ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.


ನೋಡಿರಿ, ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಾನು ಅಪ್ಪಣೆ ಮಾಡಿರುವದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು; ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು ಎಂದು ಹೇಳಿದನು.


ಅದಕ್ಕೆ ಅವನು - ಇದು ಯೆಹೋವನು ಹೇಳಿದ ಮಾತು; ನಾಳೆ ವಿರಾಮಮಾಡಿಕೊಳ್ಳತಕ್ಕ ಯೆಹೋವನ ಪರಿಶುದ್ಧ ಸಬ್ಬತ್ ದಿನವಾಗಿದೆ. [ಈ ಹೊತ್ತಿಗೆ] ಸುಡಬೇಕಾದದ್ದನ್ನು ಸುಟ್ಟು ಬೇಯಿಸಬೇಕಾದದ್ದನ್ನು ಬೇಯಿಸಿದ ನಂತರ ವಿುಕ್ಕದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿರಿ ಅಂದನು.


ಆದದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು