Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:30 - ಕನ್ನಡ ಸತ್ಯವೇದವು J.V. (BSI)

30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಸ್ವಲ್ಪವಾಗಿ ನಡಿಸಿದರೂ ಅವನನ್ನು ಇಸ್ರಾಯೇಲ್ಯರಲ್ಲಿ ಇರದಂತೆ ನಾಶ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಾವನಾದರು ಆ ದಿನ ಕಿಂಚಿತ್ತಾದರು ದುಡಿದರೆ ಅವನನ್ನು ಇಸ್ರಯೇಲರಿಂದ ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಈ ದಿನದಲ್ಲಿ ಕೆಲಸಮಾಡುವವನನ್ನು ಇಸ್ರೇಲರೊಂದಿಗೆ ಇರದಂತೆ ನಾಶಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:30
9 ತಿಳಿವುಗಳ ಹೋಲಿಕೆ  

ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಯಾವನಾದರೂ ದೇವರ ಆಲಯವನ್ನು ಕೆಡಿಸಿದರೆ ದೇವರು ಅವನನ್ನು ಕೆಡಿಸುವನು. ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲ್ಯರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ನನ್ನ ಜನರನ್ನು ದೇಶದ ಉಕ್ಕಡಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು; ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.


ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನು ಕುಲದಿಂದ ತೆಗೆದು ಹಾಕಲ್ಪಡಬೇಕು.


ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು