Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:31 - ಕನ್ನಡ ಸತ್ಯವೇದವು J.V. (BSI)

31 ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ, ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನೀವು ಅಂದು ಯಾವ ಕೆಲಸವನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ ಈ ಕಟ್ಟಳೆ ನಿಮಗೆ ಶಾಶ್ವತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀವು ಯಾವ ತರಹದ ಕೆಲಸವನ್ನೂ ಮಾಡಬಾರದು. ಇದು ನಿಮ್ಮ ಸಂತತಿಗೆ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:31
5 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಎಲ್ಲಾ ದೋಷಗಳನ್ನು ನಿವಾರಣೆಮಾಡುವದಕ್ಕಾಗಿ ಅವರಿಗೋಸ್ಕರ ವರುಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬದೇ ನಿಮಗೆ ಶಾಶ್ವತನಿಯಮ. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಸ್ವಲ್ಪವಾಗಿ ನಡಿಸಿದರೂ ಅವನನ್ನು ಇಸ್ರಾಯೇಲ್ಯರಲ್ಲಿ ಇರದಂತೆ ನಾಶ ಮಾಡುವೆನು.


ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿ ದಿನವಾಗಿರಬೇಕು. ಅದರಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು.


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದುಕೊಡುವವರೆಗೂ [ಆ ವರುಷದ ಬೆಳೆಯ] ರೊಟ್ಟಿಯನ್ನಾಗಲಿ ಸುಟ್ಟ ತೆನೆಗಳನ್ನಾಗಲಿ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.


ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆ ಕೂಡಬೇಕೆಂಬದಾಗಿ ಪ್ರಸಿದ್ಧಪಡಿಸಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು