ಯಾಜಕಕಾಂಡ 23:43 - ಕನ್ನಡ ಸತ್ಯವೇದವು J.V. (BSI)43 ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದಾಗ ಇಸ್ರಾಯೇಲ್ಯರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವದು. ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದಾಗ ಇಸ್ರಯೇಲರು ಪರ್ಣಕುಟೀರಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಸರ್ವೇಶ್ವರ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನಾನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ಕರೆದು ತಂದಾಗ, ಈ ಪರ್ಣಶಾಲೆಗಳಲ್ಲಿ ವಾಸಿಸುವಂತೆ ಮಾಡಿದವನು ನಾನೇ ಎಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಾನೇ ನಿಮ್ಮ ದೇವರಾದ ಯೆಹೋವನು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಏಕೆಂದರೆ ನಾನು ಇಸ್ರಾಯೇಲರನ್ನು ಈಜಿಪ್ಟ್ ದೇಶದೊಳಗಿನಿಂದ ಹೊರಗೆ ಬರಮಾಡಿದಾಗ, ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” ಅಧ್ಯಾಯವನ್ನು ನೋಡಿ |