ಯಾಜಕಕಾಂಡ 24:11 - ಕನ್ನಡ ಸತ್ಯವೇದವು J.V. (BSI)11 [ಯೆಹೋವನ] ಹೆಸರನ್ನು ದೂಷಿಸಿದದರಿಂದ ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಅವನ ತಾಯಿಯು ದಾನ್‍ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು. ಅಧ್ಯಾಯವನ್ನು ನೋಡಿ |