ಯಾಜಕಕಾಂಡ 24:14 - ಕನ್ನಡ ಸತ್ಯವೇದವು J.V. (BSI)14 ಆ ದೂಷಿಸಿದವನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗಿರುವ ಸ್ಥಳಕ್ಕೆ ತನ್ನಿರಿ. ಬಳಿಕ ಅವನ ದೂಷಣೆ ಮಾತುಗಳನ್ನು ಕೇಳಿದ ಎಲ್ಲಾ ಜನರನ್ನು ಒಟ್ಟಾಗಿ ಕರೆಸಿರಿ. ಆ ಜನರು ತಮ್ಮ ಕೈಗಳನ್ನು ಅವನ ತಲೆಯ ಮೇಲೆ ಇಡುವರು. ಆ ಬಳಿಕ ಎಲ್ಲಾ ಜನರು ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. ಅಧ್ಯಾಯವನ್ನು ನೋಡಿ |