Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:2 - ಕನ್ನಡ ಸತ್ಯವೇದವು J.V. (BSI)

2 ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವದಕ್ಕಾಗಿ ಇಸ್ರಾಯೇಲ್ಯರು ಎಣ್ಣೇಮರದ ಕಾಯಿಗಳನ್ನು ಕುಟ್ಟಿತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ದೇವಸ್ಥಾನದಲ್ಲಿರುವ ದೀಪಗಳನ್ನು ಪ್ರತಿನಿತ್ಯವೂ ಉರಿಸಬೇಕು. ಇದಕ್ಕಾಗಿ ಇಸ್ರಯೇಲರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಅಪ್ಪಟ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಎಣ್ಣೆ ಮರದ ಕಾಯಿಗಳನ್ನು ಕುಟ್ಟಿ ತೆಗೆದ ಶುದ್ಧವಾದ ಎಣ್ಣೆಯನ್ನು ಇಸ್ರೇಲರು ನಿನ್ನ ಬಳಿಗೆ ತರಬೇಕೆಂದು ಆಜ್ಞಾಪಿಸು. ದೇವದರ್ಶನಗುಡಾರದಲ್ಲಿರುವ ದೀಪಗಳನ್ನು ಉರಿಸಲು ಆ ಎಣ್ಣೆ ಬೇಕಾಗಿರುತ್ತದೆ. ಆ ದೀಪಗಳು ಆರಿಹೋಗದೆ ಉರಿಯುತ್ತಲೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:2
27 ತಿಳಿವುಗಳ ಹೋಲಿಕೆ  

ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಯೋಹಾನನು ಉರಿಯುವ ದೀಪದೋಪಾದಿಯಲ್ಲಿ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪಕಾಲ ವಿನೋದಗೊಳ್ಳುವದಕ್ಕೆ ಮನಸ್ಸುಮಾಡಿದಿರಿ.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀವಟಿಗೆಗಳು ಉರಿಯುತ್ತಾ ಇರಲಿ.


ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.


ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.


ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಮತ್ತು ಯೆಹೋವನು ಆಜ್ಞಾಪಿಸಿದಂತೆಯೇ ಅವನು ದೀಪಸ್ತಂಭವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣ ಕಡೆಯಲ್ಲಿ ಇಟ್ಟು


ಚೊಕ್ಕಬಂಗಾರದ ದೀಪಸ್ತಂಭವು, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆಯು ಇವುಗಳನ್ನೂ;


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಯ ಹೊರಗೆ ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು