Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:4 - ಕನ್ನಡ ಸತ್ಯವೇದವು J.V. (BSI)

4 ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತಿಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಟ್ಟು ನಿರ್ವಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆರೋನನು ಪ್ರತಿನಿತ್ಯವೂ ಸರ್ವೇಶ್ವರನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕ ಬಂಗಾರದ ದೀಪವೃಕ್ಷದ ಮೇಲೆ ಸರಿಯಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶುದ್ಧಚಿನ್ನದಿಂದ ಮಾಡಿದ ದೀಪಸ್ತಂಭದಲ್ಲಿ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಉರಿಯುತ್ತಿರುವಂತೆ ಆರೋನನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೀಪಗಳು ಚೊಕ್ಕ ಬಂಗಾರದ ದೀಪಸ್ತಂಭದ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:4
19 ತಿಳಿವುಗಳ ಹೋಲಿಕೆ  

ಮೇಜು ಅದರ ಉಪಕರಣಗಳು, ಚೊಕ್ಕಬಂಗಾರದ ದೀಪಸ್ತಂಭ, ಅದರ ಉಪಕರಣಗಳು,


ಚೊಕ್ಕಬಂಗಾರದ ದೀಪಸ್ತಂಭವು, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆಯು ಇವುಗಳನ್ನೂ;


ಭೂಲೋಕದ ಒಡೆಯನ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.


ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಗೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.


ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,


ಬಂಗಾರದ ಧೂಪವೇದಿಯು, ನೈವೇದ್ಯವಾದ ರೊಟ್ಟಿಗಳನ್ನಿಡುವದಕ್ಕಾಗಿ ಬಂಗಾರದ ಮೇಜು, ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ ಬಲಗಡೆಯಲ್ಲಿಯೂ ಐದೈದರಂತೆ ಇಡುವದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆತಂಡಸುಗಳು,


ಆಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಎಣ್ಣೆಯ ಪಾತ್ರೆಗಳನ್ನೂ ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು


ಅವರು ಕಾಪಾಡಬೇಕಾದವುಗಳು ಯಾವವಂದರೆ - ಮಂಜೂಷವೂ ಮೇಜೂ ದೀಪಸ್ತಂಭವೂ ವೇದಿಗಳೂ ದೇವಸ್ಥಾನದ ಸೇವೋಪಕರಣಗಳೂ ಒಳಗಣ ತೆರೆಯೂ ಇವುಗಳೇ. ಇವುಗಳ ಸಕಲವಿಧವಾದ ಪರಿಚರ್ಯವನ್ನು ಅವರು ಮಾಡಬೇಕು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಯ ಹೊರಗೆ ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.


ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು ಎಂದು ಹೇಳಿದನು.


ಅದರ ಮಂಟಪದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ನಂದಿಸಿ ಇಸ್ರಾಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಹಾಕುವದನ್ನೂ ಸರ್ವಾಂಗಹೋಮ ಸಮರ್ಪಿಸುವದನ್ನೂ ನಿಲ್ಲಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು