Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:6 - ಕನ್ನಡ ಸತ್ಯವೇದವು J.V. (BSI)

6 ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಸರ್ವೇಶ್ವರನ ಸಮ್ಮುಖದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿರುವ ಚಿನ್ನದ ಮೇಜಿನ ಮೇಲೆ ಎರಡು ಸಾಲಾಗಿ ಇಡಬೇಕು. ಒಂದೊಂದು ಸಾಲಿನಲ್ಲಿ ಆರಾರು ರೊಟ್ಟಿಗಳಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:6
13 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ -


ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.


ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಅವನು ದೇವಾಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ - ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,


ಆದರೆ ಎಲ್ಲವೂ ಮರ್ಯಾದೆಯಿಂದಲೂ ಕ್ರಮದಿಂದಲೂ ನಡೆಯಲಿ.


ಮೇಜು, ಅದರ ಎಲ್ಲಾ ಉಪಕರಣಗಳು, ನೈವೇದ್ಯದ ರೊಟ್ಟಿ ಇವುಗಳನ್ನೂ;


ಆ ಹಣವು ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯಧಾನ್ಯ ನೈವೇದ್ಯ ಇವುಗಳಿಗೋಸ್ಕರವೂ ನಿತ್ಯಸರ್ವಾಂಗಹೋಮ ಮತ್ತು ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲ್ಯರ ದೋಷಪರಿಹಾರಾರ್ಥವಾದ ಯಜ್ಞ ಇವುಗಳಿಗೋಸ್ಕರವೂ ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲಾ ಕೆಲಸಕ್ಕೋಸ್ಕರವೂ ವೆಚ್ಚವಾಗಬೇಕು;


ಅಲ್ಲಿ ಮರದ ವೇದಿಯೊಂದಿತ್ತು; ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳ; ಅದರ ಮೂಲೆಗಳೂ ಪೀಠವೂ ಪಕ್ಕಗಳೂ ಮರದ್ದೇ; ಆ ಪುರುಷನು ನನಗೆ - ಇದು ಯೆಹೋವನ ಸಮ್ಮುಖದ ಮೇಜು ಎಂದು ಹೇಳಿದನು.


ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.


ಧರ್ಮಶಾಸ್ತ್ರವಿಧಿಗನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿಯುರಿಸುವದಕ್ಕಾಗಿ ವರುಷ ವರುಷ ನೇವಿುತವಾದ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ ಆಯಾಗೋತ್ರಾನುಸಾರ ಕಾಷ್ಠದಾನ ಮಾಡತಕ್ಕವರು ಇಂಥವರು ಎಂಬದನ್ನು ಯಾಜಕರೂ ಲೇವಿಯರೂ ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟುಹಾಕಿ ಗೊತ್ತುಮಾಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು