Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:8 - ಕನ್ನಡ ಸತ್ಯವೇದವು J.V. (BSI)

8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್‍ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲ್ಯರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರತಿ ಸಬ್ಬತ್‌ದಿನದಲ್ಲಿ ಆರೋನನು ಯೆಹೋವನ ಸನ್ನಿಧಿಯಲ್ಲಿ ರೊಟ್ಟಿಯನ್ನು ಕ್ರಮವಾಗಿ ಯಾವಾಗಲೂ ಇಡಬೇಕು. ಇಸ್ರೇಲರೊಂದಿಗೆ ಮಾಡಲ್ಪಟ್ಟ ಒಡಂಬಡಿಕೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:8
9 ತಿಳಿವುಗಳ ಹೋಲಿಕೆ  

ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳೂ ಅದರ ಮೇಲೆ ಇರಬೇಕು.


ಅವರ ಸಹೋದರರಾದ ವಿುಕ್ಕ ಕೆಹಾತ್ಯರಲ್ಲಿ ಕೆಲವರಿಗೆ ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ಕ್ರಮಪಡಿಸುವ ಕೆಲಸವಿತ್ತು.


ಆ ಹಣವು ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯಧಾನ್ಯ ನೈವೇದ್ಯ ಇವುಗಳಿಗೋಸ್ಕರವೂ ನಿತ್ಯಸರ್ವಾಂಗಹೋಮ ಮತ್ತು ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲ್ಯರ ದೋಷಪರಿಹಾರಾರ್ಥವಾದ ಯಜ್ಞ ಇವುಗಳಿಗೋಸ್ಕರವೂ ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲಾ ಕೆಲಸಕ್ಕೋಸ್ಕರವೂ ವೆಚ್ಚವಾಗಬೇಕು;


ನೈವೇದ್ಯದ ಮೀಸಲ ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವದೂ ಸೇರು ಮೊಳಗೋಲು ಇವುಗಳನ್ನು ಪರೀಕ್ಷಿಸುವದೂ


ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.


ಅದೇ ದಿವಸ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ತಡೆಯಲ್ಪಟ್ಟಿದ್ದನು.


ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು