Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:10 - ಕನ್ನಡ ಸತ್ಯವೇದವು J.V. (BSI)

10 ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:10
30 ತಿಳಿವುಗಳ ಹೋಲಿಕೆ  

ಆಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇವಿುನವರೆಲ್ಲರೊಂದಿಗೆ ಸೇರಿ -


ಏಕಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರುಷವು ಒದಗಿತ್ತು.


ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಜೂಬಿಲಿ ವರುಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂವಿುಗಳು ತಿರಿಗಿ ನಿಮ್ಮ ವಶಕ್ಕೆ ಬರುವವು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ಹಾಗರ್ ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತ. ಅವಳು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆ ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.


ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.


ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲ ಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.


ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿದವರಿಗೆ ಆಹಾರಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.


ಹೊರಟುಹೋಗಿರಿ, ಕತ್ತಲಲ್ಲಿರುವವರಿಗೆ - ಬೆಳಕಿಗೆ ಹೊರಡಿರಿ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವಾಸ್ತ್ಯಗಳನ್ನು ಅವರಿಗೆ ಹಂಚಿ ದೇಶವನ್ನು ಜೀರ್ಣೋದ್ಧಾರಮಾಡುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಅದಕ್ಕೆ ಹುಲ್ಲುಗಾವಲಾಗುವವು.


ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಯೆಹೂದದೇಶದ ಯೆರೂಸಲೇವಿುಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ; ಅವರ ದೇವರು ಅವರ ಸಂಗಡ ಇರಲಿ.


ಆ ಐವತ್ತನೆಯ ವರುಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು; ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಆದ ಹಣ್ಣನ್ನು ಸಂಗ್ರಹಿಸಬಾರದು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಅವನ ಮಕ್ಕಳೂ ಬಿಡುಗಡೆಯಾಗಬೇಕು.


ಆದರೆ ಪ್ರಭುವು ತನ್ನ ಭೂವಿುಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನಮಾಡಿದರೆ ಬಿಡುಗಡೆಯ ವರುಷದವರೆಗೆ ಅದು ಅವನ ಅಧೀನವಾಗಿರುವದು; ಆಮೇಲೆ ಅದು ಪುನಃ ಪ್ರಭುವಿನ ವಶವಾಗುವದು; ಆದರೆ ಪ್ರಭುವು ತನ್ನ ಮಕ್ಕಳಿಗೆ ಕೊಟ್ಟ ಸ್ವಾಸ್ತ್ಯವು ಅವರಿಗೇ ಸೇರಿಬಿಡುವದು.


ಆಗ ಅವನನ್ನೂ ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವಾಸ್ತ್ಯಕ್ಕೂ ಹೋಗಬಹುದು.


ಆಗ ತಾವು ತಮ್ಮ ತಮ್ಮ ದಾಸದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು