ಯಾಜಕಕಾಂಡ 25:11 - ಕನ್ನಡ ಸತ್ಯವೇದವು J.V. (BSI)11 ಆ ಐವತ್ತನೆಯ ವರುಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು; ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಆದ ಹಣ್ಣನ್ನು ಸಂಗ್ರಹಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷೀತೋಟದ ಹಣ್ಣನ್ನು ಸಂಗ್ರಹಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನಷ್ಟಕ್ಕೆ ತಾನೇ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು. ಅಧ್ಯಾಯವನ್ನು ನೋಡಿ |