Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:2 - ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನಿಗೆ ಸಬ್ಬತ್ ಕಾಲವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುತ್ತಿರುವ ದೇಶಕ್ಕೆ ನೀವು ಪ್ರವೇಶಿಸುವಿರಿ. ಆ ಸಮಯದಲ್ಲಿ ನೀವು ಭೂಮಿಗೆ ವಿಶ್ರಾಂತಿಯ ಸಮಯವಿರುವುದಕ್ಕೆ ಬಿಡಬೇಕು. ಇದು ಯೆಹೋವನನ್ನು ಸನ್ಮಾನಿಸುವುದಕ್ಕಾಗಿರುವ ವಿಶೇಷವಾದ ವಿಶ್ರಾಂತಿಯ ಸಮಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ, ದೇಶವು ಯೆಹೋವ ದೇವರಿಗಾಗಿ ಸಬ್ಬತ್ ದಿನವನ್ನು ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:2
14 ತಿಳಿವುಗಳ ಹೋಲಿಕೆ  

ಈ ಪ್ರಕಾರ ಯೆಹೋವನು ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿ ದೇಶವು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವದಕ್ಕೆ ಮಾರ್ಗವಾಯಿತು. ದೇಶವು ಎಪ್ಪತ್ತು ವರುಷ ಹಾಳುಬಿದ್ದು ಆ ಕಾಲದಲ್ಲೆಲ್ಲಾ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ಆರು ವರುಷ ನಿಮ್ಮ ಹೊಲದಲ್ಲಿ ಬೀಜಬಿತ್ತಿ ಅದರ ಬೆಳೆಯನ್ನು ತೆಗೆದುಕೊಂಡು ಏಳನೆಯ ವರುಷದಲ್ಲಿ ಆ ಭೂವಿುಯನ್ನು ಬೀಳುಬಿಡಬೇಕು.


ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.


ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.


ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇವಿುಸಿಕೊಟ್ಟಾಗ ಇಸ್ರಾಯೇಲ್ಯರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದ್ದೂ;


ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿ ದಿನವಾಗಿರಬೇಕು. ಅದರಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು.


ನಿಮಗೆ ಸ್ವದೇಶವಾಗಿರುವದಕ್ಕೋಸ್ಕರ ನಾನು ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ


ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ;


ಪರಲೋಕವು ಯೆಹೋವನದು; ಭೂಲೋಕವನ್ನು ನರಸಂತಾನಕ್ಕೆ ಕೊಟ್ಟಿದ್ದಾನೆ.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನಂದರೆ -


ಆರು ವರುಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷೇತೋಟದ ಕೆಲಸವನ್ನು ನಡಿಸಬಹುದು; ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು