Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:21 - ಕನ್ನಡ ಸತ್ಯವೇದವು J.V. (BSI)

21 ಆರನೆಯ ವರುಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರುಷಗಳ ಬೆಳೆಯಷ್ಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳ ಬೆಳೆಯಷ್ಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ನಾನು, “ಆರನೆಯ ವರ್ಷದಲ್ಲಿ ಮೂರು ವರ್ಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:21
13 ತಿಳಿವುಗಳ ಹೋಲಿಕೆ  

ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಆಹಾರವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ನಿಮಗೆ ಊರಲ್ಲಿಯೂ ಅಡವಿಯಲ್ಲಿಯೂ ಶುಭವುಂಟಾಗುವದು.


ನೋಡಿರಿ, ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಾನು ಅಪ್ಪಣೆ ಮಾಡಿರುವದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು; ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು ಎಂದು ಹೇಳಿದನು.


ಸುಭಿಕ್ಷವಾದ ಏಳು ವರುಷಗಳಲ್ಲಿ ಭೂವಿುಯು ಹೇರಳವಾಗಿ ಫಲಕೊಟ್ಟಿತು.


ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ಆದರೆ ಏಳನೆಯ ವರುಷವು ಯಾವ ಬೇಸಾಯವೂ ನಡೆಯಬಾರದ ವಿಶ್ರಾಂತಿಕಾಲವಾಗಿಯೂ ಯೆಹೋವನಿಗೆ ಆಚರಿಸಬೇಕಾದ ಸಬ್ಬತ್‍ಕಾಲವಾಗಿಯೂ ಇರಬೇಕು; ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷೇತೋಟದ ಕೆಲಸವನ್ನು ನಡಿಸಬಾರದು.


ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂವಿುಯಲ್ಲಿ ಹುಟ್ಟಿದ್ದು ನಿಮಗೂ ನಿಮ್ಮ ದಾಸದಾಸಿಯರಿಗೂ ಕೂಲಿಯವರಿಗೂ


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.


ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಪಡಿಸಿಕೊಳ್ಳುವಾಗ ಅದು ಪ್ರತಿದಿನ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು