ಯಾಜಕಕಾಂಡ 25:23 - ಕನ್ನಡ ಸತ್ಯವೇದವು J.V. (BSI)23 ಭೂವಿುಯನ್ನು ಶಾಶ್ವತವಾಗಿ ವಿಕ್ರಯಿಸಿಬಿಡಬಾರದು. ಯಾಕಂದರೆ ಆ ಭೂವಿು ನನ್ನದು; ನೀವಾದರೋ ಪರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳುಕೊಂಡವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ ‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ. ಅಧ್ಯಾಯವನ್ನು ನೋಡಿ |