Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:24 - ಕನ್ನಡ ಸತ್ಯವೇದವು J.V. (BSI)

24 ನಿಮ್ಮಲ್ಲಿ ಮತ್ತೊಬ್ಬನ ಸ್ವಾಸ್ತ್ಯಭೂವಿು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮಲ್ಲಿ ಮತ್ತೊಬ್ಬನ ಸೊತ್ತು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಹಕ್ಕು, ಕೊಟ್ಟವನಿಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜನರು ತಮ್ಮ ಭೂಮಿಯನ್ನು ಮಾರಿದರೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಅವರ ಕುಟುಂಬಕ್ಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:24
12 ತಿಳಿವುಗಳ ಹೋಲಿಕೆ  

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವದೆಂಬದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಆ ವಿಮೋಚನೆಯು ದೇವರ ಮಹಿಮೆಗೆ ಎಷ್ಟೋ ಪ್ರಖ್ಯಾತಿಯನ್ನು ಉಂಟುಮಾಡುವದು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬೈಲಿನ ಹೊಲಗಳಂತೆ ಎಣಿಸಲ್ಪಡಬೇಕು. ಅವುಗಳನ್ನು ಬಿಡಿಸುವ ಅಧಿಕಾರವಿರುವದು; ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.


ಆ ಭೂವಿುಯನ್ನು ಮಾರಿದಂದಿನಿಂದ ಕಳೆದ ವರುಷಗಳನ್ನು ಬಿಟ್ಟು ವಿುಕ್ಕ ಕ್ರಯವನ್ನು ಕೊಟ್ಟು ತನ್ನ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಬಹುದು.


ಭೂವಿುಯನ್ನು ಶಾಶ್ವತವಾಗಿ ವಿಕ್ರಯಿಸಿಬಿಡಬಾರದು. ಯಾಕಂದರೆ ಆ ಭೂವಿು ನನ್ನದು; ನೀವಾದರೋ ಪರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳುಕೊಂಡವರೇ.


ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಸ್ಥಿತಿಯಲ್ಲಿ ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.


ಮಾರಿದವನು ಎಷ್ಟು ವರುಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;


ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು - ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು