Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:38 - ಕನ್ನಡ ಸತ್ಯವೇದವು J.V. (BSI)

38 ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವದಕ್ಕೂ ನಿಮಗೆ ಕಾನಾನ್‍ದೇಶವನ್ನು ಕೊಡುವದಕ್ಕೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನಾನು ನಿಮ್ಮ ದೇವರಾದ ಸರ್ವೇಶ್ವರ. ನಿಮಗೆ ದೇವರಾಗಿರಲು, ನಿಮಗೆ ಕಾನಾನ್ ನಾಡನ್ನು ನೀಡಲು, ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮಗೆ ಕಾನಾನ್ ದೇಶವನ್ನು ಕೊಟ್ಟು ನಿಮ್ಮ ದೇವರಾಗಿರಲು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ, ನಿನಗೆ ದೇವರಾಗಿರುವಂತೆಯೂ ನಿನ್ನನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:38
10 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾಗಿರುವದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನೇ ನಾನು; ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.


ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು. ನಾನು ನಿಮ್ಮ ದೇವರಾದ ಯೆಹೋವನು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ನೀವು ಅವನಿಗೆ ಸಾಲಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು