Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:39 - ಕನ್ನಡ ಸತ್ಯವೇದವು J.V. (BSI)

39 ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ದಾಸನಂತೆ ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ನಡೆಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಒಂದುವೇಳೆ ನಿಮ್ಮ ಸ್ವದೇಶಸ್ಥನು ಬಹಳ ಬಡವನಾಗಿ ತನ್ನನ್ನು ಗುಲಾಮನನ್ನಾಗಿ ನಿಮಗೆ ಮಾರಿಕೊಂಡರೆ ನೀವು ಅವನನ್ನು ಗುಲಾಮನನ್ನಾಗಿ ದುಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:39
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಾದರೂ ಇಬ್ರಿಯನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರುಷ ದಾಸನಾಗಿದ್ದು ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.


ಆದರೆ ಅವನು ಇಸ್ರಾಯೇಲ್ಯರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿಯೂ ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ ಸರದಾರರನ್ನಾಗಿಯೂ ರಥಾಶ್ವಬಲಗಳ ನಾಯಕರನ್ನಾಗಿಯೂ ನೇವಿುಸಿಕೊಂಡನು.


ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿರಿ, ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಇಷ್ಟರಲ್ಲೇ ಅಪಹರಿಸಿದರು; ನಮ್ಮ ಯತ್ನವೇನೂ ಸಾಗುವದಿಲ್ಲ. ನಮ್ಮ ಹೊಲತೋಟಗಳು ಪರಾಧೀನವಾದವು ಎಂದು ಗುಣುಗುಟ್ಟಿದರು.


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲ್ಯರಾದ ನೀವಾದರೋ ಎಲ್ಲರೂ ಸಹೋದರರಾಗಿರುವದರಿಂದ ಒಬ್ಬರಿಂದೊಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.


ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು;


ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಅನೇಕ ಜನಾಂಗಗಳೂ ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು.


ಸೂರ್ಯೋದಯವಾದನಂತರ ಒಬ್ಬನು ಕಳ್ಳನನ್ನು ಹೊಡೆದು ಕೊಂದರೆ ಅದು ನರಹತ್ಯವೇ ಸರಿ.) ಅವನು ಪೂರ್ತಿಯಾಗಿ ಸಲ್ಲಿಸಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ದಾಸನಾಗಿ ಮಾರಲ್ಪಡಬೇಕು.


ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.


ಆ ಸಾಲಾ ತೀರಿಸುವದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿಮಕ್ಕಳನ್ನೂ ಅವನ ಬದುಕೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.


ಇದು ಸಾಲದೆ ನೀವು ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೋ?


ಆಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇವಿುನವರೆಲ್ಲರೊಂದಿಗೆ ಸೇರಿ -


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವದಿಲ್ಲ ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು