Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:41 - ಕನ್ನಡ ಸತ್ಯವೇದವು J.V. (BSI)

41 ಆಗ ಅವನನ್ನೂ ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವಾಸ್ತ್ಯಕ್ಕೂ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆಗ ಅವನನ್ನೂ ಅವನ ಮಕ್ಕಳನ್ನೂ ಬಿಡುಗಡೆ ಮಾಡಬೇಕು; ಆಗ ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸೊತ್ತಿಗೂ ಹಿಂದಿರುಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ತರುವಾಯ ಅವನು ನಿನ್ನ ಬಳಿಯಿಂದ ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೆ ಹಿಂದಿರುಗಬೇಕು. ತನ್ನ ಪಿತೃಗಳ ಸೊತ್ತಿಗೂ ಅವನು ಹಿಂದಿರುಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:41
8 ತಿಳಿವುಗಳ ಹೋಲಿಕೆ  

ಅವನು ಆ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರುಷದಲ್ಲಿ ಅದು ಬಿಡುಗಡೆಯಾಗುವದು; ಆಗ ಆ ಭೂವಿು ತಿರಿಗಿ ಅವನ ವಶಕ್ಕೆ ಬರುವದು.


ಅವನು ಮದುವೆಯಿಲ್ಲದವನಾಗಿ ಬಂದಿದ್ದರೆ ಒಂಟಿಗನಾಗಿಯೇ ಹೊರಟುಹೋಗಬೇಕು. ಹೆಂಡತಿಯುಳ್ಳವನಾಗಿ ಬಂದಿದ್ದರೆ ಹೆಂಡತಿಯೂ ಅವನ ಜೊತೆಯಲ್ಲಿ ಹೋಗಬೇಕು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ.


ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು.


ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು.


ಅವನು ಕೂಲಿಯವನಂತೆಯೂ ಪರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.


ಅವರು ನನಗೇ ದಾಸರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ವಿಕ್ರಯಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು