Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:42 - ಕನ್ನಡ ಸತ್ಯವೇದವು J.V. (BSI)

42 ಅವರು ನನಗೇ ದಾಸರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ವಿಕ್ರಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅಂಥವರು ನನಗೇ ದಾಸರು. ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆ. ಗುಲಾಮರನ್ನು ಮಾರುವಂತೆ ನೀವು ಅವರನ್ನು ವಿಕ್ರಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯಾಕೆಂದರೆ ಅವರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ಗುಲಾಮತನದಿಂದ ಹೊರಗೆ ಬರಮಾಡಿದೆನು; ಅವರು ಮತ್ತೆ ಗುಲಾಮರಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಕರತಂದ ಇಸ್ರಾಯೇಲರು ನನ್ನ ಸೇವಕರಾಗಿದ್ದಾರೆ, ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:42
8 ತಿಳಿವುಗಳ ಹೋಲಿಕೆ  

ಯಾಕಂದರೆ ಇಸ್ರಾಯೇಲ್ಯರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ಆಗ ಅವನನ್ನೂ ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವಾಸ್ತ್ಯಕ್ಕೂ ಹೋಗಬಹುದು.


ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ನೀವು ಐಗುಪ್ತ್ಯರಿಗೆ ದಾಸರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದೆನಲ್ಲವೇ.


ಬಿಡುವಾಗ ಬರೀಗೈಯಲ್ಲಿ ಕಳುಹಿಸಿಬಿಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು