Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:51 - ಕನ್ನಡ ಸತ್ಯವೇದವು J.V. (BSI)

51 ಜೂಬಿಲಿ ಸಂವತ್ಸರವು ಬರುವದಕ್ಕೆ ಇನ್ನು ಅನೇಕ ವರುಷಗಳಿದ್ದರೆ ಹೆಚ್ಚು ಭಾಗವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಹೆಚ್ಚು ಭಾಗವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಜ್ಯೂಬಿಲಿ ವರ್ಷಕ್ಕೆ ಇನ್ನೂ ಹೆಚ್ಚು ವರ್ಷಗಳು ಇರುವುದಾದರೆ, ಅವನು ಬಹಳ ಹೆಚ್ಚು ಹಣವನ್ನು ಕೊಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಜೂಬಿಲಿ ಸಂವತ್ಸರದವರೆಗೆ ಇನ್ನು ಬಹಳ ವರುಷಗಳಿದ್ದರೆ ಅವುಗಳ ಪ್ರಕಾರ ತನ್ನ ವಿಮೋಚನೆಯ ಕ್ರಯವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:51
5 ತಿಳಿವುಗಳ ಹೋಲಿಕೆ  

ಅದರಂತೆ ಮಾರುವವನು ಇಷ್ಟು ವರುಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು. [ಮುಂದಣ ಜೂಬಿಲಿ ಸಂವತ್ಸರದ ತನಕ] ಹೆಚ್ಚು ವರುಷಗಳಾದರೆ ಭೂವಿುಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು; ಭೂವಿುಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.


ಅವನು ತನ್ನನ್ನು ಮಾರಿಕೊಂಡ ವರುಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರುಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕಿಸುವಂತೆ ಅವನ ವಿಷಯದಲ್ಲಿಯೂ ಲೆಕ್ಕಿಸಬೇಕು.


ಕೆಲವು ವರುಷಗಳು ಮಾತ್ರ ಉಳಿದರೆ ಸ್ವಲ್ಪ ಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.


ನಿಮ್ಮಲ್ಲಿ ಮತ್ತೊಬ್ಬನ ಸ್ವಾಸ್ತ್ಯಭೂವಿು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.


ಜೂಬಿಲಿ ಸಂವತ್ಸರದ ತರುವಾಯ ಭೂವಿುಯನ್ನು ಹರಕೆಮಾಡಿದರೆ ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರುಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕವ್ಮಿುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು