ಯಾಜಕಕಾಂಡ 25:9 - ಕನ್ನಡ ಸತ್ಯವೇದವು J.V. (BSI)9 ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನಿಮ್ಮ ದೇಶದಲ್ಲೆಲ್ಲಾ ಕೊಂಬಿನ ಧ್ವನಿಯನ್ನು ಮಾಡಿಸಬೇಕು; ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬಿನ ಧ್ವನಿಯನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು. ಅಧ್ಯಾಯವನ್ನು ನೋಡಿ |