ಯಾಜಕಕಾಂಡ 26:1 - ಕನ್ನಡ ಸತ್ಯವೇದವು J.V. (BSI)1 ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |