Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:13 - ಕನ್ನಡ ಸತ್ಯವೇದವು J.V. (BSI)

13 ನೀವು ಐಗುಪ್ತ್ಯರಿಗೆ ದಾಸರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದೆನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನೀವು ಗುಲಾಮರಾಗಿ ಭಾರವಾದ ಹೊರೆಗಳನ್ನು ಹೊರುತ್ತಾ ಗೂನಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲಿದ್ದ್ದ ನೊಗವನ್ನು ನಾನು ಮುರಿದುಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:13
18 ತಿಳಿವುಗಳ ಹೋಲಿಕೆ  

ತೋಟದ ಮರಗಳು ಹಣ್ಣುಬಿಡುವವು; ಹೊಲಗಳು ಒಳ್ಳೆಯ ಬೆಳೆಕೊಡುವವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಗೂಟಗಳನ್ನು ನಾನು ಮುರಿದುಹಾಕಿ ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.


ಯೆಹೋವನೇ, ಕರುಣಿಸು, ನಾನು ನಿನ್ನ ಕಿಂಕರನು; ನಿನ್ನ ದಾಸಿಯ ಮಗನೂ ನಿನ್ನ ಸೇವಕನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದೀ.


ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವದಕ್ಕೂ ನಿಮಗೆ ಕಾನಾನ್‍ದೇಶವನ್ನು ಕೊಡುವದಕ್ಕೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದವನೇ.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಯಾಕಂದರೆ ಇಸ್ರಾಯೇಲ್ಯರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ.


ಅವರು ನನಗೇ ದಾಸರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ವಿಕ್ರಯಿಸಬಾರದು.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವದು, ಕಾರ್ಮುಗಿಲು ಅದನ್ನು ಆವರಿಸುವದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.


ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು; ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ ಅವರಿಗೆ ತೀನಿಯನ್ನು ನಯದಿಂದ ಇಕ್ಕಿದೆನು.


ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.


ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ, ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ; ಸುಗ್ಗಿಕಾಲದಲ್ಲಿ ಜನರು ಹರ್ಷಿಸುವ ಹಾಗೂ ಕೊಳ್ಳೆಯನ್ನು ಹಂಚಿಕೊಳ್ಳುವವರು ಹೆಚ್ಚಳಪಡುವ ಹಾಗೂ ನಿನ್ನ ಮುಂದೆ ಆನಂದಿಸುತ್ತಾರೆ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು [ನಿಮಗೆ] ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.


ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬೆಲಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನು. ಬಾಬೆಲಿನ ಅರಸನು [ನಿಮಗೆ] ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.


ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದುಬಿಟ್ಟು ಕಣ್ಣಿಗಳನ್ನು ಕಿತ್ತುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು