Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:16 - ಕನ್ನಡ ಸತ್ಯವೇದವು J.V. (BSI)

16 ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:16
35 ತಿಳಿವುಗಳ ಹೋಲಿಕೆ  

ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ!


ನಾನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದುಹಾಕದೆ ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಗೇಡಿಗೂ ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹೃತರಾಗುವರು.


ನೀನು ಬಿತ್ತಿದರೂ ಕೊಯ್ಯುವದಿಲ್ಲ; ಎಣ್ಣೆಯ ಕಾಯಿಯನ್ನು ತುಳಿದರೂ ಮೈಗೆ ಎಣ್ಣೆ ಹಚ್ಚಿಕೊಳ್ಳುವದಿಲ್ಲ, ದ್ರಾಕ್ಷೆಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವದಿಲ್ಲ.


ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲಾ.


ಇವರು ನಿನ್ನ ಬೆಳೆಯನ್ನೂ ನಿನ್ನ ಆಹಾರವನ್ನೂ ನಿನ್ನ ಗಂಡು ಹೆಣ್ಣುಮಕ್ಕಳನ್ನೂ ನಿನ್ನ ದನಕುರಿಗಳನ್ನೂ ನಿನ್ನ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು; ನಿನ್ನ ಭರವಸದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ಆದದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ ಅವರ ವರುಷಗಳನ್ನು ಭೀಕರವಾಗಿಯೂ ಮುಗಿಸಿದನು.


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ದನಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವದು ಭಯಂಕರವಾದದ್ದು.


ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು.


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.


ಏಕಂದರೆ ಯೆಹೋವನು - ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗೆ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ಅದನ್ನು ಕಣ್ಣಾರೆ ಕಾಣುವಿ; ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.


ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ದುಷ್ಟಾಧಿಕಾರಿಯನ್ನು ಅವನ ಮೇಲೆ ನೇವಿುಸು; ತಪ್ಪುಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.


ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಬರುವದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.


ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಅಂಜಿಸಿ ಹಿಮ್ಮಡಿತುಳಿಯುತ್ತಾ ಬೆನ್ಹತ್ತುವವು.


ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಮನೆಯ ಹೊರಗೆ ಕತ್ತಿಯೂ ಒಳಗೆ ಭಯವೂ ಇರುವವು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ


ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.


ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;


ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು, ಅಂದರೆ ಕಡಿಯುವದಕ್ಕೆ ಖಡ್ಗವನ್ನು, ಸೀಳುವದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವದಕ್ಕೆ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನೇವಿುಸುವೆನು ಎಂಬದು ಯೆಹೋವನಾದ ನನ್ನ ಮಾತು.


ರುಮಾಲನ್ನು ಸುತ್ತಿಕೊಂಡು ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವದಿಲ್ಲ, ಅಳುವದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರೆದುರಿಗೊಬ್ಬರು ನರಳುವಿರಿ.


ಆಹಾ, ನಿಮ್ಮ ಬೀಜವನ್ನು [ಬೆಳೆಯದಂತೆ]ಖಂಡಿಸುವೆನು; ನಿಮ್ಮ ಮುಖದ ಮೇಲೆ ಮಲವನ್ನು, ನಿಮ್ಮ ಹಬ್ಬದ ಪಶುಗಳ ಮಲವನ್ನು ಚೆಲ್ಲಿಬಿಡುವೆನು; ನೀವು ಆ ಮಲದ ತಿಪ್ಪೆಯ ಪಾಲಾಗುವಿರಿ.


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು