Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:22 - ಕನ್ನಡ ಸತ್ಯವೇದವು J.V. (BSI)

22 ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮನ್ನು ಸಂತಾನವಿಲ್ಲದವರನ್ನಾಗಿ ಮಾಡುವವು; ನಿಮ್ಮ ಪಶುಗಳನ್ನು ಕೊಲ್ಲುವವು; ನಿಮ್ಮನ್ನು ಸ್ವಲ್ಪ ಮಂದಿಯನ್ನಾಗಿ ಮಾಡುವವು; ನಿಮ್ಮ ದಾರಿಗಳು ಹಾಳುಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿಮಗೆ ವಿರುದ್ಧವಾಗಿ ನಾನು ಕ್ರೂರ ಮೃಗಗಳನ್ನು ಕಳುಹಿಸುವೆನು. ಅವುಗಳು ನಿಮ್ಮ ಮಕ್ಕಳನ್ನು ತಿಂದು ಬಿಡುವವು; ನಿಮ್ಮ ಪಶುಗಳನ್ನು ನಾಶಮಾಡುವವು. ಅವು ನಿಮ್ಮಲ್ಲಿ ಅನೇಕ ಜನರನ್ನು ಕೊಲ್ಲುವವು. ದಾರಿಗಳು ಜನಸಂಚಾರವಿಲ್ಲದೆ ಬರಿದಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:22
17 ತಿಳಿವುಗಳ ಹೋಲಿಕೆ  

ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಪಡಿಸಿ ಹಾಳುಮಾಡಿ ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ


ಅವರು ಬರದಿಂದ ಕ್ಷೀಣವಾಗುವರು, ತಾಪದಿಂದಲೂ ಅಂಟುರೋಗದಿಂದಲೂ ಸಾಯುವರು; ಅದಲ್ಲದೆ ನಾನು ದುಷ್ಟಮೃಗಗಳನ್ನೂ ವಿಷಸರ್ಪಗಳನ್ನೂ ಅವರ ಮೇಲೆ ಬರಮಾಡುವೆನು.


ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತು ಹೋಯಿತು; ಪ್ರಯಾಣಿಕರು ಸೀಳುದಾರಿಹಿಡಿದು ಹೋಗುವರು.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವದರಿಂದ ಚೀಯೋನಿಗೆ ಹೋಗುವ ದಾರಿಗಳು ಬಣಬಣ ಎನ್ನುತ್ತವೆ; ಅದರ ಬಾಗಿಲುಗಳೆಲ್ಲಾ ಹಾಳುಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಯುವತಿಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕಿಸುತ್ತದೆ.


ರಾಜಮಾರ್ಗಗಳು ಹಾಳಾಗಿವೆ, ದಾರಿಗರು ಇಲ್ಲವೇ ಇಲ್ಲ; [ಶತ್ರುವು] ಒಪ್ಪಂದವನ್ನು ಮೀರಿದ್ದಾನೆ, ಊರಿನವರನ್ನು ತಿರಸ್ಕರಿಸಿದ್ದಾನೆ, ಮನುಷ್ಯರನ್ನು ಗಣನೆಗೆ ತಾರನು.


ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲವಾದದರಿಂದ ಆತನು ಸಿಂಹಗಳನ್ನು ಕಳುಹಿಸಿದನು; ಅವು ಅವರಲ್ಲಿ ಅನೇಕರನ್ನು ಕೊಂದವು.


ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ನಾನು ದೇಶವನ್ನು ಹಾಳುಪಾಳುಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವದು; ಇಸ್ರಾಯೇಲಿನ ಮಲೆನಾಡು ಬೀಡುಬೀಳುವದು; ಯಾರೂ ಅಲ್ಲಿ ಹಾದುಹೋಗರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!


ನಿನ್ನ ಜೀವನಾಧಾರವನ್ನು ಮುರಿದುಹಾಕುವೆನು; ನಾನು ಕಳುಹಿಸುವ ಕ್ಷಾಮವೂ ದುಷ್ಟಮೃಗಗಳೂ ನಿನಗೆ ಪುತ್ರಶೋಕವನ್ನುಂಟುಮಾಡುವವು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಯೆಹೋವನಾದ ನನ್ನ ನುಡಿ.


ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು, ಅಂದರೆ ಕಡಿಯುವದಕ್ಕೆ ಖಡ್ಗವನ್ನು, ಸೀಳುವದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವದಕ್ಕೆ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನೇವಿುಸುವೆನು ಎಂಬದು ಯೆಹೋವನಾದ ನನ್ನ ಮಾತು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವದಕ್ಕೆ ಆಗುತ್ತಿರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದು ಅವನಿಗೆ - ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು