Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:3 - ಕನ್ನಡ ಸತ್ಯವೇದವು J.V. (BSI)

3 ನೀವು ನನ್ನ ನಿಯಮಗಳನ್ನು ಕೈಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಜ್ಞಾಪಕಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:3
19 ತಿಳಿವುಗಳ ಹೋಲಿಕೆ  

ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ


ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು; ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವೆನು;


ನೆಮ್ಮದಿಯ ಬೆಳೆಯಾಗುವದು; ದ್ರಾಕ್ಷಾಲತೆಯು ಹಣ್ಣುಬಿಡುವದು, ಭೂವಿುಯು ಧಾನ್ಯವನ್ನೀಯುವದು, ಆಕಾಶವು ಇಬ್ಬನಿಯನ್ನು ಸುರಿಸುವದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.


ಐದನೆಯ ವರುಷದಲ್ಲಿ ಅದರಿಂದುಂಟಾಗುವ ಆದಾಯವು ನಿಮ್ಮದೇ ಆಗಿರುವದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.


ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.


ಆಗ ನೀವು ಹೊಲದಲ್ಲಿ ಬೀಜಬಿತ್ತುವದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡದೊಡ್ಡ ಕಾವಲುಗಳಲ್ಲಿ ಮೇಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು