Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:30 - ಕನ್ನಡ ಸತ್ಯವೇದವು J.V. (BSI)

30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:30
28 ತಿಳಿವುಗಳ ಹೋಲಿಕೆ  

ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಸುಡಿಸಿ ಯೆರೂಸಲೇವಿುಗೆ ಹಿಂದಿರುಗಿ ಹೋದನು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ರೇಗಿದವನಾಗಿ ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.


ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ತರುವಾಯ ಜನರೆಲ್ಲರೂ ಬಾಳ್‍ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಮುಂದೆಯೇ ಕೊಂದು ದೇವಸ್ಥಾನವನ್ನೂ ಅದರಲ್ಲಿದ್ದ ವೇದಿವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು.


ಅವನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡದಲ್ಲಿ ಸಮಾಧಿಗಳನ್ನು ಕಂಡು ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಡಿಸಿ ಅದನ್ನು ಹೊಲೆಮಾಡಿದನು; ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.


ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿಬಿಟ್ಟನು.


ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ವೇದಿಯನ್ನು ಕುರಿತು - ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬೊಬ್ಬನು ಹುಟ್ಟುವನು; ಅವನು ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ ಅಂದನು.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನವನ್ನು ಮೀರಿ ನಡೆದರೆ


ನಾನು ನಿಮ್ಮ ನಡುವೆ ನಿವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವದಿಲ್ಲ;


ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದದರಿಂದ ನನಗೆ ಹೇಸಿಗೆಯಾದರು.


ನಾವು ಈ ಸ್ಥಳವನ್ನು ನಾಶಮಾಡುವದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ ಎಂದು ಹೇಳಿದರು.


ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಗಳ ವಿಷಯದಲ್ಲಿ ವ್ಯಥೆಪಟ್ಟನು.


ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರೋಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರೋಧವಾಗಿಯೂ ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು ಅಂದನು.


ಆಗ ಯೆಹೋವನ ಕೋಪವು ಅವರ ಮೇಲೆ ಉರಿಗೊಂಡಿತು; ಆತನು ತನ್ನ ಸ್ವಾಸ್ತ್ಯವಾದ ಪ್ರಜೆಗಳನ್ನು ಅಸಹಿಸಿ


ನುಡಿಯುವಾತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಇದು ನನ್ನ ಸಿಂಹಾಸನ ಸ್ಥಾನ, ನನ್ನ ಪಾದಸನ್ನಿಧಿ; ಇಲ್ಲಿ ನಾನು ಇಸ್ರಾಯೇಲ್ಯರ ಮಧ್ಯೆ ಸದಾ ವಾಸಿಸುವೆನು; ಇಸ್ರಾಯೇಲ್‍ವಂಶದವರಾಗಲಿ ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ ಗತಿಸಿದ ಅರಸರ ಶವಗಳಿಂದಲೂ


ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು,


ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.


ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.


ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ದಿಬ್ಬವನ್ನು ಕೆಡವಿ ನಿನ್ನ ಜಗಲಿಗಳನ್ನು ಒಡೆದು ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


ಇಸ್ರಾಯೇಲ್ಯರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ; ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹಸ್ತಂಭಗಳನ್ನು ಹಾಳುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು