Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:32 - ಕನ್ನಡ ಸತ್ಯವೇದವು J.V. (BSI)

32 ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ಒಕ್ಕಲಾಗುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಿಮ್ಮ ಭೂಮಿಯನ್ನು ಬರಿದುಮಾಡುವೆ. ಅದರಲ್ಲಿ ವಾಸಿಸಲು ಬರುವ ನಿಮ್ಮ ವೈರಿಗಳೂ ಅದನ್ನು ನೋಡಿ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:32
28 ತಿಳಿವುಗಳ ಹೋಲಿಕೆ  

ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವದು; ಮತ್ತು ಈ ಜನಾಂಗಗಳು ಎಪ್ಪತ್ತು ವರುಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಬಂಧಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ಯೆರೂಸಲೇವಿುಗೂ ಯೆಹೂದದ ಪಟ್ಟಣಗಳಿಗೂ ಅರಸರಿಗೂ ಪ್ರಧಾನರಿಗೂ ಕುಡಿಸಿದೆನು; ಇದರಿಂದ ಅವರು ಹಾಳಾಗಿ ಬೆರಗಿನ ಸಿಳ್ಳಿಗೂ ಶಾಪಕ್ಕೂ ಗುರಿಯಾಗುವದಕ್ಕೆ ಆಸ್ಪದವಾಯಿತು.


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಅಬ್ಬಬ್ಬಾ, ಇದೇನು! ಯೆಹೋವನು ಈ ದೇಶವನ್ನೂ ಈ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.


ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.


ಆಹಾ, ಅಂಜೂರವು ಚಿಗುರದಿದ್ದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರವನ್ನು ಕೊಡದೆಹೋದರೂ ಹಿಂಡು ಹಟ್ಟಿಯೊಳಗಿಂದ ನಾಶವಾದರೂ ಮಂದೆಯು ಕೊಟ್ಟಿಗೆಗಳೊಳಗೆ ಇಲ್ಲದಿದ್ದರೂ


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.


ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು


ಇದರಿಂದ ನಮ್ಮ ಹೃದಯವು ಕುಂದಿದೆ, ಇದರಿಂದ ನಮ್ಮ ಕಣ್ಣು ಮೊಬ್ಬಾಗಿದೆ.


ವೈರಿಗಳೂ ವಿರೋಧಿಗಳೂ ಯೆರೂಸಲೇವಿುನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಭೂಪತಿನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.


ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ಯೆರೂಸಲೇವಿುಗೂ ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ;


ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ.


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿಹೋಗಿದೆ.


ಇಗೋ, ಯೆಹೋವನು ಲೋಕವನ್ನು ಬರಿದುಮಾಡಿ ಹಾಳಿಗೆ ತಂದು ವಿರೂಪಪಡಿಸಿ ಅದರ ನಿವಾಸಿಗಳನ್ನು ಚದರಿಸಿಬಿಡುವವನಾಗಿದ್ದಾನೆ.


ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ


ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನ ಒಂದು ಮಾತು ಬಿದ್ದಿತು, ನೋಡಿರಿ - ಸೊಗಸಾದ ಅನೇಕ ದೊಡ್ಡ ಮನೆಗಳು ವಾಸಿಸುವವರೇ ಇಲ್ಲದೆ ಖಂಡಿತವಾಗಿ ಹಾಳಾಗುವವು.


ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.


ಹೌದು, ಹಾಳು ಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾವನೂ ಮನಸ್ಸಿಗೆ ತಾರದ್ದರಿಂದ ದೇಶವೆಲ್ಲಾ ಹಾಳುಬಿದ್ದಿದೆ.


ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿದೆ ಎಂದು ನೀವೆನ್ನುವ ಈ ಸ್ಥಳದಲ್ಲಿ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇವಿುನ ಬೀದಿಗಳಲ್ಲಿ ಹರ್ಷಧ್ವನಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು