Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:34 - ಕನ್ನಡ ಸತ್ಯವೇದವು J.V. (BSI)

34 ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್‍ಕಾಲವನ್ನು ಅನುಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆಸೇರಿಸುವಾಗಲೆಲ್ಲಾ ನಿಮ್ಮ ನಾಡು ಹಾಳುಬಿದ್ದು, ತನಗೆ ಸಲ್ಲಬೇಕಾದ ಸಬ್ಬತ್ ಕಾಲವನ್ನು ಅನುಭವಿಸುವುದು. ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಸವಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನೀವು ನಿಮ್ಮ ವೈರಿಗಳ ದೇಶಕ್ಕೆ ಒಯ್ಯಲ್ಪಟ್ಟಾಗ, ನಿಮ್ಮ ದೇಶ ಬರಿದಾಗುವುದಲ್ಲದೆ ಭೂಮಿಯು ಹಾಳುಬಿದ್ದು ವಿಶ್ರಾಂತಿಯನ್ನು ಅನುಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ನಾಡು ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವವರೆಗೂ, ನಾಡು ತನ್ನ ಸಬ್ಬತ್ ಕಾಲವನ್ನು ಅನುಭವಿಸುವುದು. ಆಗ ನೆಲವು ವಿಶ್ರಮಿಸಿಕೊಂಡು ತನ್ನ ವಿಶ್ರಾಂತಿಯ ಕಾಲವನ್ನು ಅನುಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:34
7 ತಿಳಿವುಗಳ ಹೋಲಿಕೆ  

ಈ ಪ್ರಕಾರ ಯೆಹೋವನು ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿ ದೇಶವು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವದಕ್ಕೆ ಮಾರ್ಗವಾಯಿತು. ದೇಶವು ಎಪ್ಪತ್ತು ವರುಷ ಹಾಳುಬಿದ್ದು ಆ ಕಾಲದಲ್ಲೆಲ್ಲಾ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.


ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಹೊಂದುವದು. ಅವರು ಯೆಹೋವನ ಆಜ್ಞೆಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವದು.


ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು.


ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿವಸಗಳಲ್ಲಿ ಅನುಭವಿಸುವದು.


ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು