ಯಾಜಕಕಾಂಡ 26:36 - ಕನ್ನಡ ಸತ್ಯವೇದವು J.V. (BSI)36 ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು. ಅಧ್ಯಾಯವನ್ನು ನೋಡಿ |