ಯಾಜಕಕಾಂಡ 26:39 - ಕನ್ನಡ ಸತ್ಯವೇದವು J.V. (BSI)39 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪಿತೃಗಳ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆದ್ದರಿಂದ ನಿಮ್ಮಲ್ಲಿ ಜೀವಂತವಾಗಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಅಧ್ಯಾಯವನ್ನು ನೋಡಿ |
ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.