Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:46 - ಕನ್ನಡ ಸತ್ಯವೇದವು J.V. (BSI)

46 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ಯರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಮೇಲೆ ಕಂಡವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಸರ್ವೇಶ್ವರ ಸ್ವಾಮಿ ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೆಹೋವನು ಇಸ್ರೇಲರಿಗೆ ಕೊಟ್ಟ ಕಟ್ಟಳೆಗಳು, ನಿಯಮಗಳು ಮತ್ತು ಉಪದೇಶಗಳು ಇವೇ. ಇದು ಯೆಹೋವನ ಮತ್ತು ಇಸ್ರೇಲರ ನಡುವೆ ಆದ ಒಡಂಬಡಿಕೆಯ ನಿಯಮಗಳಾಗಿವೆ. ಯೆಹೋವನು ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಕೊಟ್ಟನು. ಮೋಶೆ ಅವುಗಳನ್ನು ಜನರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:46
15 ತಿಳಿವುಗಳ ಹೋಲಿಕೆ  

ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞೆಗಳು ಇವೇ.


ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನೀವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ -


ನೀವು ಹೊಳೆ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ವಿಧಿನಿರ್ಣಯಗಳೂ ಇವೇ.


ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ ಆತನ ಆಜ್ಞೆಗಳನ್ನೇ ಅನುಸರಿಸಿ ಆತನಿಗೇ ವಿಧೇಯರಾಗಿ ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನಂದರೆ -


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಕುರುಬನು ಕುರಿಹಿಂಡನ್ನು ಹೇಗೋ ಹಾಗೆ ನೀನು ಮೋಶೆ ಆರೋನರ ಮುಖಾಂತರ ನಿನ್ನ ಪ್ರಜೆಯನ್ನು ಕರೆದೊಯ್ದಿ.


ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನ.


ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದ್ದನ್ನೆಲ್ಲಾ ಆರೋನನೂ ಅವನ ಮಕ್ಕಳೂ ಮಾಡಿದರು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ - ಇಸ್ರಾಯೇಲ್ಯರು ಅರ್ಪಿಸಬೇಕಾದದ್ದನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ವಿಧಿಗಳನ್ನು ಕೊಟ್ಟನು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲ್ಯರೊಡನೆ ಮಾಡಿದ ನಿಬಂಧನವಲ್ಲದೆ ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ನಿಬಂಧನ ವಚನಗಳು.


ಮೋಶೆಯು ಯಾಕೋಬ್ ಸಂತತಿಯವರಾದ ನಮಗೆ ಧರ್ಮಶಾಸ್ತ್ರವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು