Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:6 - ಕನ್ನಡ ಸತ್ಯವೇದವು J.V. (BSI)

6 ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆ. ಶತ್ರುಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:6
43 ತಿಳಿವುಗಳ ಹೋಲಿಕೆ  

ಸಿಂಹವು ಅಲ್ಲಿರದು, ಕ್ರೂರ ಜಂತು ಅಲ್ಲಿ ಸೇರದು, ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು;


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.


ಆತನು ನಿನ್ನ ಪ್ರಾಂತದೊಳಗೆ ಸೌಭಾಗ್ಯವನ್ನುಂಟುಮಾಡುತ್ತಾನೆ; ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.


ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ.


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಪಡಿಸಿ ಹಾಳುಮಾಡಿ ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ


ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವದಿಲ್ಲ. ಅನೇಕರು ನಿನ್ನ ಮುಖಪ್ರಸನ್ನತೆಯನ್ನು ಅಪೇಕ್ಷಿಸುವರು.


ಆದರೆ ನಾನು ಒಂದೇ ವರುಷದೊಳಗೆ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವದಿಲ್ಲ; ಯಾಕಂದರೆ ದೇಶದಲ್ಲಿ ಜನರು ಕಡಿಮೆಯಾಗುವದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾದೀತು.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನಾನು ಎಫ್ರಾಯೀವಿುನ ರಥಬಲವನ್ನೂ ಯೆರೂಸಲೇವಿುನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ [ಯೂಫ್ರೇಟೀಸ್] ನದಿಯಿಂದ ಭೂವಿುಯ ಕಟ್ಟಕಡೆಯವರೆಗೂ ಹರಡಿಕೊಂಡಿರುವದು.


ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.


ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ ನಾನು ಅದನ್ನು ಆ ದೇಶಕ್ಕೆ ತಂದು ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ನಿನ್ನ ಜೀವನಾಧಾರವನ್ನು ಮುರಿದುಹಾಕುವೆನು; ನಾನು ಕಳುಹಿಸುವ ಕ್ಷಾಮವೂ ದುಷ್ಟಮೃಗಗಳೂ ನಿನಗೆ ಪುತ್ರಶೋಕವನ್ನುಂಟುಮಾಡುವವು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಯೆಹೋವನಾದ ನನ್ನ ನುಡಿ.


ಯೆಹೋವದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರಿಗಿ ಮೂರ್ಖತನದಲ್ಲಿ ಬೀಳದಿರಲಿ.


ನಾನು ನಿರ್ಭಯವಾಗಿರುವದರಿಂದ ಮಲಗಿಕೊಂಡು ಕೂಡಲೆ ನಿದ್ದೆ ಮಾಡುವೆನು; ಯಾಕಂದರೆ ಯೆಹೋವನೇ, ನಾನು ಯಾವ ಅಪಾಯವೂ ಇಲ್ಲದೆ ಸುರಕ್ಷಿತನಾಗಿರುವಂತೆ ನೀನು ಕಾಪಾಡುತ್ತೀ.


ನಿನಗೆ ಒಬ್ಬ ಮಗನು ಹುಟ್ಟುವನು; ಅವನು ಸಮಾಧಾನಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಣಗಿಸಿ ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವದು. ಅವನ ಕಾಲದಲ್ಲಿ ಇಸ್ರಾಯೇಲ್ಯರಿಗೆ ಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿವಸದ ಹಿಂದಿನ ರಾತ್ರಿಯಲ್ಲಿ ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ ಇಬ್ಬರು ಸಿಪಾಯಿಗಳ ನಡುವೆ ನಿದ್ದೆ ಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!


(ಇದಾದ ಮೇಲೆ ನಾನು ಎಚ್ಚತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.)


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಯೆಹೋವನು ನನ್ನನ್ನು ಕಾಪಾಡುವವನಾದ್ದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.


ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ನಡಿಸುವದು, ಮಲಗಿಕೊಂಡಾಗ ಕಾಯುವದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.


ನೀನು ಮಲಗುವಾಗ ಹೆದರಿಕೆ ಇರುವದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.


ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು.


ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮನ್ನು ಸಂತಾನವಿಲ್ಲದವರನ್ನಾಗಿ ಮಾಡುವವು; ನಿಮ್ಮ ಪಶುಗಳನ್ನು ಕೊಲ್ಲುವವು; ನಿಮ್ಮನ್ನು ಸ್ವಲ್ಪ ಮಂದಿಯನ್ನಾಗಿ ಮಾಡುವವು; ನಿಮ್ಮ ದಾರಿಗಳು ಹಾಳುಬೀಳುವವು.


ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ, ಅವರನ್ನು ಕತ್ತಿಯಿಂದ ಸಂಹರಿಸುವಿರಿ;


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ;


ನಿಮ್ಮ ಭೂವಿುಯು ಫಲವತ್ತಾಗುವದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ, ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.


ಹೀಗೆ ದೇವಾನುಗ್ರಹದಿಂದ ಸುತ್ತಣ ವೈರಿಗಳ ಭಯತಪ್ಪಿ ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನವುಂಟಾಯಿತು.


ನಮ್ಮ ಎತ್ತುಗಳು ದೊಡ್ಡ ಹೇರುಗಳನ್ನು ಹೊತ್ತು ಬರುವವು. ವೈರಿಗಳು ಒಳಗೆ ನುಗ್ಗುವದಾಗಲಿ ನಮ್ಮವರನ್ನು ಒಯ್ಯುವದಾಗಲಿ ಇರುವದಿಲ್ಲ; ಬೀದಿಗಳಲ್ಲಿ ಗೋಳಾಟವು ಕೇಳಿಸುವದಿಲ್ಲ.


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ತೋಟದ ಮರಗಳು ಹಣ್ಣುಬಿಡುವವು; ಹೊಲಗಳು ಒಳ್ಳೆಯ ಬೆಳೆಕೊಡುವವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಗೂಟಗಳನ್ನು ನಾನು ಮುರಿದುಹಾಕಿ ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.


ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು