Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:2 - ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ [ಅವುಗಳನ್ನು ಬಿಡಿಸುವದಕ್ಕೆ] ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಯಾರಾದರು ನರಮಾನವರ ಪ್ರಾಣವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಬೆಳ್ಳಿನಾಣ್ಯದ ಮೇರೆಗೆ ನೀವು ಅವರಿಂದ ಕೊಡಿಸಬೇಕಾದ ಈಡಿನ ವಿವರ ಹೀಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:2
14 ತಿಳಿವುಗಳ ಹೋಲಿಕೆ  

ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಎರಡು ತಿಂಗಳು ಕಳೆದನಂತರ ಆಕೆಯು ತಿರಿಗಿ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.


ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ


ಇಸ್ರಾಯೇಲ್ಯರು ಯೆಹೋವನಿಗೆ ಹರಕೆಯನ್ನು ಮಾಡಿಕೊಂಡು - ನಾವು ಈ ಜನವನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಪೂರ್ಣವಾಗಿ ಹಾಳುಮಾಡಿ ಯೆಹೋವನಿಗಾಗಿಯೇ ಬಿಟ್ಟುಬಿಡುತ್ತೇವೆ ಅಂದರು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಮತ್ತೊಬ್ಬನ ದ್ರಾಕ್ಷೇತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತೆಗೆದುಕೊಂಡು ಹೋಗಬಾರದು.


ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿರುತ್ತದೆಂದು ನೋಡಿ ಅದನ್ನು ಸರಿಮಾಡುವದಕ್ಕೋಸ್ಕರ ವಿನಿಯೋಗಿಸಿರಿ; ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು.


ಕನಸು ಬಹು ಪ್ರಯಾಸದಿಂದಲೂ ಉಂಟಾಗುತ್ತದೆ, ಮೂಢನ ಧ್ವನಿಯು ಬಹು ಮಾತುಗಳಿಂದಲೂ ಕೂಡಿದ್ದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು