ಯಾಜಕಕಾಂಡ 27:21 - ಕನ್ನಡ ಸತ್ಯವೇದವು J.V. (BSI)21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನ ಸ್ವಕೀಯವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲ ಸರ್ವೇಶ್ವರನ ಸ್ವಕೀಯ ಹೊಲವಾದಂತೆ ಅವರ ಸೊತ್ತಾಗಿಯೇ ಇರಬೇಕು. ಅದು ಯಾಜಕರ ವಶದಲ್ಲಿ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿ |
ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.