Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:26 - ಕನ್ನಡ ಸತ್ಯವೇದವು J.V. (BSI)

26 [ಶುದ್ಧ] ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಕೂಡದು; ಹೋರಿಯಾಗಿದ್ದರೂ ಆಡುಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಶುದ್ಧಪ್ರಾಣಿಯಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಸರ್ವೇಶ್ವರನಿಗೆ ಸೇರಿದ್ದು. ಆದ್ದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಕೂಡದು. ಚೊಚ್ಚಲು ಮರಿ ಹೋರಿಯೇ ಆಗಿರಲಿ, ಆಡುಕುರಿಯೇ ಆಗಿರಲಿ. ಅದು ಸರ್ವೇಶ್ವರನ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಜನರು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ದನಗಳನ್ನು ಮತ್ತು ಕುರಿಗಳನ್ನು ಕೊಡಬಹುದು. ಆದರೆ ಪಶುವು ಚೊಚ್ಚಲಾದದ್ದಾಗಿದ್ದರೆ, ಅದು ಈಗಾಗಲೇ ಯೆಹೋವನದ್ದಾಗಿರುತ್ತದೆ. ಆದ್ದರಿಂದ ಜನರು ಅಂಥ ಪಶುಗಳನ್ನು ಯೆಹೋವನಿಗೆ ವಿಶೇಷ ಕಾಣಿಕೆಯಾಗಿ ಕೊಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:26
9 ತಿಳಿವುಗಳ ಹೋಲಿಕೆ  

ದನಗಳಲ್ಲಿಯೂ ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು.; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.


ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವದರಿಂದ ಅವುಗಳನ್ನು ಬಿಡಕೂಡದು; ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.


ಅದೇ ಮೇರೆಗೆ ನಿಮ್ಮ ಕುರಿದನಗಳ ಚೊಚ್ಚಲುಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿವಸ ಆ ಮರಿ ತಾಯಿಯ ಹತ್ತಿರ ಇರಲಿ; ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ಅಶುದ್ಧ ಪಶುವಿನಲ್ಲಿ ಚೊಚ್ಚಲುಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.


ಇಸ್ರಾಯೇಲ್ಯರ ಚೊಚ್ಚಲಾದವರೆಲ್ಲರು ನನ್ನ ಸೊತ್ತಷ್ಟೆ; ಐಗುಪ್ತದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ ಪಶುಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆನಲ್ಲಾ; ಅವರು ನನ್ನವರೇ; ನಾನು ಯೆಹೋವನು ಎಂದು ಹೇಳಿದನು.


ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುವೆವು; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡಿಸುತ್ತಿರುವ ಯಾಜಕರಿಗೆ ಕೊಡುವೆವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು