ಯಾಜಕಕಾಂಡ 27:28 - ಕನ್ನಡ ಸತ್ಯವೇದವು J.V. (BSI)28 ಯಾವನಾದರೂ ಮನುಷ್ಯನನ್ನಾಗಲಿ ಪಶುವನ್ನಾಗಲಿ ಪಿತ್ರಾರ್ಜಿತಭೂವಿುಯನ್ನಾಗಲಿ ಬೇರೆ ಯಾವದನ್ನಾಗಲಿ ಕೇವಲ ಯೆಹೋವನದಾಗಿರುವದಕ್ಕೆ ಹರಕೆಮಾಡಿಕೊಟ್ಟರೆ ಅದನ್ನು ಮಾರಲೂ ಕೂಡದು ಬಿಡಿಸಿಕೊಳ್ಳಲೂ ಕೂಡದು. ಕೇವಲ ಯೆಹೋವನದಾಗಿರುವದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಯಾರಾದರು ನರಮಾನವನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ, ಬೇರೆ ಯಾವುದನ್ನೇ ಆಗಲಿ ಯಾವ ಶರತ್ತೂ ಇಲ್ಲದೆ ಸಂಪೂರ್ಣವಾಗಿ ಸರ್ವೇಶ್ವರನದಾಗಿರಲು ಹರಕೆ ಮಾಡಿಕೊಟ್ಟರೆ ಅದನ್ನು ಮಾರಲೂಕೂಡದು, ಬಿಡಿಸಿಕೊಳ್ಳಲೂಬಾರದು. ಸಂಪೂರ್ಣ ಸರ್ವೇಶ್ವರನದಾಗಿರಲು ಸಮರ್ಪಿಸುವಂಥದೆಲ್ಲಾ ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಜನರು ಯೆಹೋವನಿಗೆ ಸಲ್ಲಿಸುವ ವಿಶೇಷ ಬಗೆಯ ಕಾಣಿಕೆಯು ಯೆಹೋವನಿಗೆ ಮಾತ್ರ ಸೇರಿದ್ದಾಗಿರುತ್ತದೆ. ಅದನ್ನು ಬಿಡಿಸಿಕೊಳ್ಳುವುದಕ್ಕಾಗಲಿ ಮಾರುವುದಕ್ಕಾಗಲಿ ಆಗುವುದಿಲ್ಲ. ಅದು ಯೆಹೋವನದ್ದಾಗಿರುತ್ತದೆ. ಈ ಕಾಣಿಕೆಗಳು ಜನರನ್ನು, ಪಶುಗಳನ್ನು ಮತ್ತು ಪಿತ್ರಾರ್ಜಿತ ಸ್ವತ್ತುಗಳನ್ನು ಒಳಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿ |