ಯಾಜಕಕಾಂಡ 27:33 - ಕನ್ನಡ ಸತ್ಯವೇದವು J.V. (BSI)33 ಆ ಪಶುವು ಒಳ್ಳೇದೋ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲಾಗಿ ಲೆಕ್ಕಿಸಿದ್ದೂ ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನವಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆ ಪಶುಪ್ರಾಣಿ ಒಳ್ಳೆಯದೋ ಕೆಟ್ಟದ್ದೋ ಎಂದು ನೋಡಬಾರದು. ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದು ಹಾಗು ಅದಕ್ಕೆ ಬದಲಾಗಿ ಇಟ್ಟಿದ್ದು ಎರಡು ಸರ್ವೇಶ್ವರನದಾಗಿರಬೇಕು. ಅದನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದಿಲ್ಲ.“ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆರಿಸಲ್ಪಟ್ಟ ಪಶುವು ಒಳ್ಳೆಯದೋ ಕೆಟ್ಟದ್ದೋ ಎಂದು ಅದರ ಮಾಲಿಕನು ಚಿಂತೆ ಮಾಡಬಾರದು. ಅವನು ಅದನ್ನು ಬದಲಾಯಿಸಬಾರದು. ಅವನು ಅದನ್ನು ಬದಲಾಯಿಸಲು ತೀರ್ಮಾನಿಸಿದರೆ, ಆಗ ಎರಡೂ ಪಶುಗಳು ಯೆಹೋವನದಾಗುತ್ತವೆ. ಆ ಪಶುವನ್ನು ಮರಳಿ ಕೊಂಡುಕೊಳ್ಳಲಾಗದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’ ” ಅಧ್ಯಾಯವನ್ನು ನೋಡಿ |