Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:12 - ಕನ್ನಡ ಸತ್ಯವೇದವು J.V. (BSI)

12 ಸಮರ್ಪಿಸುವಂಥದು ಆಡಾಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಮರ್ಪಿಸುವಂಥದ್ದು ಆಡಾಗಿದ್ದರೆ ಅರ್ಪಿಸುವವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಸಮರ್ಪಿಸಲ್ಪಡುವ ಪಶು ಆಡಾಗಿದ್ದರೆ, ಸಮರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ ‘ಸಮರ್ಪಣೆಯು ಮೇಕೆಯಾಗಿದ್ದರೆ, ಅದನ್ನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:12
15 ತಿಳಿವುಗಳ ಹೋಲಿಕೆ  

ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


[ಜನರೆಲ್ಲರಿಗೋಸ್ಕರ] ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತನ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು -


ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಸಮರ್ಪಿಸಿದನು.


ಮತ್ತು ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಅವರಿಗೆ - ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನಾದದರಿಂದ ನೀವು ಆತನ ಸನ್ನಿಧಿಯಲ್ಲಿ ಸಮರ್ಪಿಸುವದಕ್ಕೋಸ್ಕರ ದೋಷಪರಿಹಾರಕ್ಕಾಗಿ ಹೋತವನ್ನೂ ಸರ್ವಾಂಗಹೋಮಕ್ಕಾಗಿ ಒಂದು ವರುಷದ ಪೂರ್ಣಾಂಗವಾದ ಕರುವನ್ನೂ ಕುರಿಯನ್ನೂ


ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿಯೇ ಇರಬೇಕು.


ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಮತ್ತು ಅವನು ಆ ಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡುತುಂಡಾಗಿ ಕಡಿಯಬೇಕು.


ಆಜ್ಞಾಪಿಸಬೇಕಾದದ್ದೇನಂದರೆ - ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅದನ್ನು ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ತೆಗೆದುಕೊಂಡು ಸಮರ್ಪಿಸಬೇಕು.


ಟಗರಿನೊಂದಿಗೆ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು