ಯಾಜಕಕಾಂಡ 3:2 - ಕನ್ನಡ ಸತ್ಯವೇದವು J.V. (BSI)2 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಆ ಪ್ರಾಣಿಯನ್ನು ಸರ್ವೇಶ್ವರನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಡಬೇಕು; ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |