Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:8 - ಕನ್ನಡ ಸತ್ಯವೇದವು J.V. (BSI)

8 ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವದರ್ಶನದ ಗುಡಾರದ ಎದುರಿಗೆ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:8
17 ತಿಳಿವುಗಳ ಹೋಲಿಕೆ  

ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿರುವ ಯಜ್ಞವೇದಿಗೆ ಸುತ್ತಲೂ ಎರಚಬೇಕು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ದೇವರ ಸಾನ್ನಿಧ್ಯ ಸೇರುವದಕ್ಕೆ ನಮಗಿರುವ ಭರವಸವುಳ್ಳ ಧೈರ್ಯವು ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗೆ ಉಂಟಾಯಿತು.


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕಯಜ್ಞ.


ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಲಿಗೆ ತಂದು ಅದರ ತಲೆಯ ಮೇಲೆ ಕೈಯಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರಕಡೆ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.


ಅವನು ಆ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದಕ್ಕಾಗಿ ಅಂಗೀಕಾರವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು