Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:13 - ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಇಸ್ರೇಲರ ಇಡೀ ಜನಾಂಗವೆಲ್ಲಾ ತಿಳಿಯದೆ ಪಾಪಮಾಡುವ ಸ್ಥಿತಿ ಸಂಭವಿಸಬಹುದು. ಯೆಹೋವನು ಮಾಡಬಾರದೆಂದು ಆಜ್ಞಾಪಿಸಿದವುಗಳಲ್ಲಿ ಯಾವುದಾದರೊಂದನ್ನು ಅವರು ಮಾಡಿದರೆ ಅವರು ದೋಷಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:13
17 ತಿಳಿವುಗಳ ಹೋಲಿಕೆ  

ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.


ಹೀಗಿರುವದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ದ್ರೋಹಮಾಡಿದವನಾಗಿರುವನು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿ ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿ ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾದರು.


ಅವನು ಆಯಾ ವಸ್ತುಗಳನ್ನೇ ಅಂದರೆ ಕದ್ದದ್ದನ್ನೂ ಮೋಸದಿಂದ ಪಡೆದದ್ದನ್ನೂ ತನ್ನ ವಶಕ್ಕೆ ತೆಗೆದುಕೊಂಡದ್ದನ್ನೂ ತಾನು ಕಂಡುಕೊಂಡದ್ದನ್ನೂ


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕಯಜ್ಞ.


ಇಸ್ರಾಯೇಲ್ಯರ ಜನಸಮೂಹದಿಂದ ದೋಷಪರಿಹಾರಕಯಜ್ಞಕ್ಕಾಗಿ ಎರಡು ಹೋತಗಳನ್ನೂ ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.


ಯೆಹೋವನು ಮೋಶೆಯ ಮೂಲಕ ಈ ಆಜ್ಞೆಗಳನ್ನು ಕೊಟ್ಟ ದಿನ ಮೊದಲುಗೊಂಡು ನಿಮ್ಮ ಎಲ್ಲಾ ತಲಾಂತರಗಳವರೆಗೂ ಯಾವಾಗಲಾದರೂ ಸಮೂಹದವರು ತಿಳಿಯದೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಗಳಾದರೆ


ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.


ಆ ದಿನದಲ್ಲಿ ಪ್ರಭುವು ತನ್ನ ನಿವಿುತ್ತವೂ ದೇಶದ ಜನರೆಲ್ಲರ ನಿವಿುತ್ತವೂ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು