ಯಾಜಕಕಾಂಡ 4:2 - ಕನ್ನಡ ಸತ್ಯವೇದವು J.V. (BSI)2 ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ] ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು: ಅಧ್ಯಾಯವನ್ನು ನೋಡಿ |