Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:21 - ಕನ್ನಡ ಸತ್ಯವೇದವು J.V. (BSI)

21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಜಕನು ಈ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ, ಆ ಮೊದಲನೆಯ ಹೋರಿಯನ್ನು ಸುಟ್ಟುಹಾಕಿದ ಸ್ಥಳದಲ್ಲಿಯೇ ಅದನ್ನು ಸುಡಬೇಕು. ಇದು ಇಡೀ ಸಮೂಹದ ಪಾಪವನ್ನು ಪರಿಹಾರ ಮಾಡುವ ಸಮರ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:21
18 ತಿಳಿವುಗಳ ಹೋಲಿಕೆ  

ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ದೇಶಾಂತರದ ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್‍ದೇವರಿಗೆ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿ ಮರಿಗಳನ್ನೂ ಸಮಸ್ತ ಇಸ್ರಾಯೇಲ್ಯರ ನಿವಿುತ್ತವಾಗಿ ಹನ್ನೆರಡು ಹೋರಿಗಳನ್ನೂ ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗ ಹೋಮವೇ.


ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಾಯೇಲ್ಯರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ ಅಪರಾಧಗಳನ್ನೂ ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.


ಮಹಾಯಾಜಕನು ದೋಷಪರಿಹಾರಕಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ.


ಇಸ್ರಾಯೇಲ್ಯರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ


ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.


ಅವರೆಲ್ಲರೂ ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ ನೈವೇದ್ಯವಾಗಿ ಅದಕ್ಕೆ ನೇವಿುತವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ದೋಷಪರಿಹಾರಕಯಜ್ಞವಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ಹೋರಿಯ ಮಾಂಸವನ್ನೂ ಚರ್ಮವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಇದು ದೋಷಪರಿಹಾರಕಯಜ್ಞ.


ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ನಿಶ್ಶೇಷವಾಗಿ ಹೋಮಮಾಡಿಬಿಡಬೇಕು; ಅದನ್ನು ತಿನ್ನಲೇಬಾರದು.


ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ವಿುಕ್ಕದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನೂ ಮಾಂಸವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.


ದೋಷಪರಿಹಾರಕಯಜ್ಞಪಶುಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.


ಆ ದಿನದಲ್ಲಿ ಪ್ರಭುವು ತನ್ನ ನಿವಿುತ್ತವೂ ದೇಶದ ಜನರೆಲ್ಲರ ನಿವಿುತ್ತವೂ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋರಿಯನ್ನು ಒಪ್ಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು