Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:3 - ಕನ್ನಡ ಸತ್ಯವೇದವು J.V. (BSI)

3 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:3
32 ತಿಳಿವುಗಳ ಹೋಲಿಕೆ  

ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನೀನು ದೋಷಪರಿಹಾರಕಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನೂ ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನೂ ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.


ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದನಂತರ ಅದನ್ನು ಪರಿಹರಿಸಿಕೊಳ್ಳುವದಕ್ಕಾಗಿ [ಪೂರ್ಣಾಂಗವಾದ] ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತರಿಸಿದಾಗ


ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣಾರ್ಥವಾಗಿ ಯಜ್ಞಗಳನ್ನು ಮಾಡಬೇಕಾದವನಾಗಿದ್ದಾನೆ.


ದೇಶಾಂತರದ ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್‍ದೇವರಿಗೆ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿ ಮರಿಗಳನ್ನೂ ಸಮಸ್ತ ಇಸ್ರಾಯೇಲ್ಯರ ನಿವಿುತ್ತವಾಗಿ ಹನ್ನೆರಡು ಹೋರಿಗಳನ್ನೂ ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗ ಹೋಮವೇ.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಲೇವಿಯರೂ ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡು. ಇದು ಕರ್ತನಾದ ಯೆಹೋವನ ನುಡಿ.


ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ ಅಭಿಷೇಕತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿವಿುಕಿಸಬೇಕು. ಹೀಗೆ ಅವನೂ ಅವನ ಮಕ್ಕಳೂ ಅವರ ವಸ್ತ್ರಗಳು ಸಹಿತವಾಗಿ ಪರಿಶುದ್ಧರಾಗುವರು.


ಹೋರಿಯ ಮಾಂಸವನ್ನೂ ಚರ್ಮವನ್ನೂ ಕಲ್ಮಷವನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಇದು ದೋಷಪರಿಹಾರಕಯಜ್ಞ.


ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನಮಾಡಿ ಅವನನ್ನು ಅಭಿಷೇಕಿಸಬೇಕು.


ತರುವಾಯ ಅವರು [ಸರ್ವಾಂಗಹೋಮಕ್ಕಾಗಿ] ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆಬೆರಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಬೇಕು.


ಆರೋನನು ತನಗೋಸ್ಕರವಾದ ದೋಷಪರಿಹಾರಕಯಜ್ಞದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರವನ್ನು ಮಾಡಬೇಕು.


ಆರೋನನು ತನಗೋಸ್ಕರವಾಗಿ ತಂದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರ ಮಾಡಬೇಕು.


ಅದರಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯಿದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.


ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬಂದು


ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು;


ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ಒಬ್ಬನು ಆಡನ್ನಾಗಲಿ ಕುರಿಯನ್ನಾಗಲಿ ಸರ್ವಾಂಗಹೋಮ ಮಾಡಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮಸಂತತಿಯವರಿಗೂ ಸಲ್ಲತಕ್ಕದ್ದೆಂಬದು ಶಾಶ್ವತ ನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವದು.


ಮತ್ತು ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಅವರಿಗೆ - ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನಾದದರಿಂದ ನೀವು ಆತನ ಸನ್ನಿಧಿಯಲ್ಲಿ ಸಮರ್ಪಿಸುವದಕ್ಕೋಸ್ಕರ ದೋಷಪರಿಹಾರಕ್ಕಾಗಿ ಹೋತವನ್ನೂ ಸರ್ವಾಂಗಹೋಮಕ್ಕಾಗಿ ಒಂದು ವರುಷದ ಪೂರ್ಣಾಂಗವಾದ ಕರುವನ್ನೂ ಕುರಿಯನ್ನೂ


ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಾಗಿ ಬರಬೇಕು. ಅವನು ದೋಷಪರಿಹಾರಕಯಜ್ಞಕ್ಕಾಗಿ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಟಗರನ್ನೂ ತರಬೇಕು.


ಇಸ್ರಾಯೇಲ್ಯರ ಜನಸಮೂಹದಿಂದ ದೋಷಪರಿಹಾರಕಯಜ್ಞಕ್ಕಾಗಿ ಎರಡು ಹೋತಗಳನ್ನೂ ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.


ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು.


ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಣ ಪ್ರಾಕಾರಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು