Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:32 - ಕನ್ನಡ ಸತ್ಯವೇದವು J.V. (BSI)

32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:32
19 ತಿಳಿವುಗಳ ಹೋಲಿಕೆ  

ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ;


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಅದನ್ನು ಕಳಂಕ ಸುಕ್ಕು ಮುಂತಾದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ ನಿರ್ದೋಷವೂ ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಮಾಡಿದನು.


ಅಗೋ ಯಜ್ಞಕ್ಕೆ ದೇವರು ನೇವಿುಸಿದ ಕುರಿ ಅಂದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.


ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.


ಆ ಮರಿಯು ಪೂರ್ಣಾಂಗವಾದ ಒಂದು ವರುಷದ ಗಂಡಾಗಿರಬೇಕು; ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ಇದರ ವಿಷಯದಲ್ಲಿ ನೀವು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಅಪ್ಪಣೆ ಮಾಡಬೇಕಾದದ್ದೇನಂದರೆ - ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು